ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ತನಿಖೆಗೆ ಮಧ್ಯಂತರ ತಡೆಯಾಜ್ಞೆ ಮಾ.31ರವರೆಗೆ ವಿಸ್ತರಣೆ.

Promotion

ಬೆಂಗಳೂರು,ಮಾರ್ಚ್,24,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ  ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್​​ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.  ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ವಿಚಾರಣೆ ಮತ್ತೊಂದು ಪೀಠದಲ್ಲಿರುವ ಹಿನ್ನೆಲೆ, ಆ ಅರ್ಜಿಯ ವಿಚಾರಣೆಯನ್ನೂ ಇದೇ ಪೀಠಕ್ಕೆ ವರ್ಗಾಯಿಸಲು ಸೂಚನೆ ನೀಡಲಾಗಿದೆ.  ಈ ಹಿಂದೆಯೂ ಕೂಡ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿ ಹೊರಡಿಸಿದ್ದ ಆದೇಶವನ್ನ ಕರ್ನಾಟಕ ಹೈಕೋರ್ಟ್ ಮಾರ್ಚ್ 24ರವರೆಗೂ ವಿಸ್ತರಿಸಿತ್ತು.

ಈ ನಡುವೆ ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ ಶಿವಕುಮಾರ್​ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ನಟಜರಾಜನ್​ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ಮಾಡಿತ್ತು.

ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು  ಅಸಮಾಧಾನ ವ್ಯಕ್ತಪಡಿಸಿದ್ದರು.

Key words: DK Shivakumar -Extension – interim- injunction –CBI- investigation -till -March 31