Sunday, September 20, 2026

BDA Apartments

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ BDA JK_Adv BDA Adv
Home Front Page ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

ಬೆಂಗಳೂರು, ಡಿಸೆಂಬರ್ 17, 2021 (www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿವ ಜಾವ ನಿಧನರಾಗಿದ್ದಾರೆ.

ನಿಂಗಮ್ಮ ಅವರಿಗೆ (106) ವರ್ಷ ವಯಸ್ಸಾಗಿತ್ತು.  ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.