ಕಣ್ಣು, ಕಿವಿ ಇಲ್ಲದ ಸರಕಾರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು, ಮೇ 05, 2020 (www.justkannada.in): ವಲಸೆ ಕಾರ್ಮಿಕರ ರವಾನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ರಾಜ್ಯದ ಕಾರ್ಮಿಕರ ಬಳಿ ಶ್ರೀಮಂತಿಕೆ ಇಲ್ಲದಿರಬಹುದು. ಹಾಗಂತ ಅವರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರವೂ ಇದೆ. ಈ ಸರ್ಕಾರಕ್ಕೆ ಕಣ್ಣೂ ಇಲ್ಲ, ಕಿವಿಯೂ ಇಲ್ಲ. ವಲಸೆ ಕಾರ್ಮಿಕರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಿವಕುಮಾರ್ ಅವರು, ನಮ್ಮ ರಾಜ್ಯದಿಂದ 25 ಸಂಸದರನ್ನು ಆಯ್ಕೆ ಮಾಡಿ ಕಳಿಸಿದ್ದೇವೆ. ರೈಲ್ವೇ ಖಾತೆ ರಾಜ್ಯ ಸಚಿವರೂ ಕೂಡ ನಮ್ಮ ರಾಜ್ಯದವರೇ. ಹೀಗಿರುವಾಗ ಬೇರೆ ರಾಜ್ಯಗಳಲ್ಲಿ ನೀಡಲಾಗಿರುವ ರೈಲು ಸೇವೆಯನ್ನು ರಾಜ್ಯದಲ್ಲೂ ತಂದು ಹೊರ ರಾಜ್ಯಗಳಲ್ಲಿ ಸಿಲುಕಿರುವ ನಮ್ಮ ಜನರನ್ನು ವಾಪಸ್ ಕರೆ ತರಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.