ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ.

Promotion

ಮೈಸೂರು,ಫೆಬ್ರವರಿ,16,2023(www.justkannada.in): ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದರು.

ಕೆ.ಆರ್ ನಗರದಲ್ಲಿನ ಹೆಚ್.ವಿಶ್ವನಾಥ್ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹೆಚ್.ವಿಶ್ವನಾಥ್ ಜೊತೆ ಚಹ ಸೇವಿಸಿ ಮಾತುಕತೆ ನಡೆಸಿದರು. ಈಗಾಗಲೇ ಹೆಚ್.ವಿಶ್ವನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ  ಸುಳಿವು ನೀಡಿದ್ದು, ಇತ್ತೀಚೆಗಷ್ಟೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದರು.

ಅಲ್ಲದೆ ಕಾಂಗ್ರೆಸ್ ನನ್ನ ರಕ್ತದಲ್ಲಿದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗುವ ಸೂಚನೆಯನ್ನೂ ನೀಡಿದ್ದರು. ಇದೀಗ ಡಿ.ಕೆ ಶಿವಕುಮಾರ್ ಭೇಟಿ ಮತ್ತಷ್ಟು ಪುಷ್ಟಿ ನೀಡಿದೆ.

Key words: DK Shivakumar -visited –MLC- H. Vishwanath- residence.