14ರಂದು ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸರಕಾರಕ್ಕೆ ಮನವಿ: ಡಿಕೆ ಶಿವಕುಮಾರ್

Promotion

ಬೆಂಗಳೂರು, ಜೂನ್ 07, 2020 (www.justkannada.in): ಕೆಪಿಸಿಸಿ ಅಧ್ಯಕ್ಷನಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಸರಕಾರಕ್ಕೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೇನೆ, ಸರ್ಕಾರ ಅವಕಾಶ ನೀಡಿದರೆ ಸರಳ ಕಾರ್ಯಕ್ರಮ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ 150 ಮಂದಿ ಮಾತ್ರ ಭಾಗವಹಿಸಲಿದ್ದಾರೆ, ಕೆಲವು ಶಾಸಕರು, ಗಣ್ಯರಿಗಷ್ಟೇ ಅವಕಾಶ. ಕಾರ್ಯಕ್ರಮದಲ್ಲಿ ಭಾಗಿಯಾಗುವರೆಗೆ ಪಾಸ್ ನೀಡಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಅನುಮತಿ ನೀಡುವ ವಿಶ್ವಾಸವಿದೆ. ಹೀಗಾಗಿ 14ರಂದು ಕಾರ್ಯಕ್ರಮ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಸರ್ಕಾರ ಅನುಮತಿ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.