ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ತ್ಯಾಗಕ್ಕೆ ಸಿದ್ಧ ಎಂದು ಪರೋಕ್ಷವಾಗಿ ಹೇಳಿದ್ರಾ ಡಿ.ಕೆ ಶಿವಕುಮಾರ್.

Promotion

ಬೆಂಗಳೂರು,ಏಪ್ರಿಲ್,8,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ ಎಂಬ ಮಾತುಗಳಿ ಕೇಳಿ ಬಂದಿದೆ. ಈ ಮಧ್ಯೆ ಸಿಎಂ ಸ್ಥಾನಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ರೇಸ್ ನಲ್ಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಹೌದು ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ತ್ಯಾಗಕ್ಕೆ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಪರ ಬ್ಯಾಟ್ ಬೀಸಿದ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ನನಗಿಂತ ರಾಜಕೀಯದಲ್ಲಿ ದೊಡ್ಡವರು. ಖರ್ಗೆ ಏನು ಇಚ್ಛೇ ಪಡುತ್ತಾರೋ ಅದನ್ನ ಈಡೇರಿಸುತ್ತೇನೆ. ಖರ್ಗೆ ಕೈಕೆಳಗೆ ಕೆಲಸ ಮಾಡುವುದಕ್ಕೆ ನಾನು ಇಷ್ಟಪಡುತ್ತೇನೆ . ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ಆಸ್ತಿ ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ ಎಂದಿದ್ದಾರೆ.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ  ಅನರ್ಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್,  ಇಷ್ಟು ಬೇಗ ತೀರ್ಪು ಆಗುತ್ತದೆ ಎಂದು  ನನಗೆ ಗೊತ್ತಿರಲಿಲ್ಲ. ಕೇಂಧ್ರ ನಾಯಕರ ಒತ್ತಡಕ್ಕೆ ಮಣಿದು ಲೋಕಸಭಾ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ಕೋಲಾರದಲ್ಲಿ ರಾಹುಲ್ ಗಾಂಧಿ ಸಮಾವೇಶ ಮಾಡಲಿದ್ದಾರೆ.  ಏ.16 ರಂದು ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

Key words: DK Sivakumar -indirectly – Mallikarjuna Kharge – ready – CM.