ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದೇ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ: ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು, ಜನವರಿ 16, 2022 (www.justkannada.in): ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದೇ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಮಹಾಸ್ಫೋಟ ಸಂಭವಿಸಿದೆ. ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.15ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 22284 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1395736ಕ್ಕೆ ಏರಿಕೆಯಾಗಿದೆ.

ಈ ನಡುವೆ  ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದೇ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.