ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಆರೋಪ: ಖಾಸಗಿ ಬಸ್ ಮಾಲೀಕರಿಗೆ ಸಚಿವ ಶ್ರೀರಾಮುಲು ವಾರ್ನಿಂಗ್.

ಬೆಂಗಳೂರು,ಸೆಪ್ಟಂಬರ್,30,2022(www.justkannada.in): ದಸರಾ ಹಬ್ಬ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ವಾರ್ನಿಂಗ್ ನೀಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಚಿವ ಶ್ರೀರಾಮುಲು,  ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ. ಅನಗತ್ಯವಾಗಿ ಜನರಿಗೆ ತೊಂದರೆ ಕೊಡಬಾರದು.  ಯಾರಾದರೂ ಹೆಚ್ಚಿನ ದರ ಪಡೆದರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ದರ ಹೆಚ್ಚು ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ರಾಜ್ಯಾದ್ಯಂತ ಈ ತಂಡ ತಪಾಸಣೆ ಕಾರ್ಯಚರಣೆ ನಡೆಸಲಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Key words: double money – passengers-Minister- Sriramulu -warning – private bus- owners