ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್, ಇದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ- ಪ್ರಧಾನಿ ಮೋದಿಗೆ ಶುಭ ಹಾರೈಸಿದ ಮಾಜಿ ಸಿಎಂ ಸಿದ್ಧರಾಮಯ್ಯ .

ಬೆಂಗಳೂರು,ಜೂನ್,20,2022(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಇಂದು ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ, ಈ ಹಿನ್ನೆಲೆಯಲ್ಲಿ ಈ ಕುರಿತು ತಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಹೇಳಿ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಐದು ವರ್ಷಗಳ ಹಿಂದೆ (4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು.

ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್.

ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.sidd

ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ B.Sc(Honours) Economics ತರಗತಿಗಳು ಪ್ರಾರಂಭವಾಗಿತ್ತು.

ಪ್ರಧಾನಿ ನರೇಂದ್ರಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ  ಎಂದು ಎದಿದ್ದಾರೆ.

Key words: Dr. BR Ambedkar -School -of Economics-former CM -Siddaramaiah –PM Modi.