ಡಾ.ಕಮಲಾ ಹಂಪನಾ, ಶ್ರೀಓಬಳಪ್ಪ, ಡಾ.ಜಿ.ರಂಗಯ್ಯಗೆ ವಾಲ್ಮೀಕಿ ಪ್ರಶಸ್ತಿ

ಬೆಂಗಳೂರು, ಅಕ್ಟೋಬರ್ 13, 2019 (www.justkannada.in): ಪರಿಶಿಷ್ಟ ಜನಾಂಗದ ಶ್ರೋಯೋಭಿವೃದಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಪ್ರಕಟಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ.ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಗುರುತರವಾಗಿ ಸೇವೆಸಲ್ಲಿಸುತ್ತಿರುವ ಶ್ರೀಓಬಳಪ್ಪ ಹಾಗು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ. ರಂಗಯ್ಯ ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ರಾಂತ ಕುಲಪತಿಗಳು ಹಾಗು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಿರಂಜನ್ ಎಸ್. ಆರ್. ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಈ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿ ವರದಿ ನೀಡಲಾಗಿದ್ದು, ಸರ್ಕಾರವು ಈ ವರದಿಯನ್ನು ಅಂಗೀಕರಿಸಿದೆ. ಪ್ರತಿ ಪ್ರಶಸ್ತಿಯು ತಲಾ 20 ಗ್ರಾಂ ಚಿನ್ನದ ಪದಕ ಹಾಗು 5 ಲಕ್ಷ ನಗದು ಅನ್ನ ಒಳಗೊಂಡಿರುತ್ತದೆ.