ಗಂಧದಗುಡಿ ಪ್ರಿ ರಿಲೀಸ್ ಇವೆಂಟ್ ಗೆ ಸಿಎಂ ಬೊಮ್ಮಾಯಿ ಆಹ್ವಾನಿಸಿದ ಡಾ.ರಾಜ್ ಕುಟುಂಬ

ಬೆಂಗಳೂರು,ಅಕ್ಟೋಬರ್,11,2022(www.justkannada.in): ಅಕ್ಟೋಬರ್ 21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಗೆ ಆಗಮಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಡಾ.ರಾಜ್ ಕುಟುಂಬ ಆಹ್ವಾನ ನೀಡಿತು.

ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಆಗಿದ್ದು,  ಸಖತ್​ ಸದ್ದು ಮಾಡುತ್ತಿದೆ.  ಅಕ್ಟೋಬರ್ 21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದ್ದು  ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​, ಹಿರಿಯ ನಟ ರಾಘವೇಂದ್ರ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.

ಸಿನಿಮಾದ ರೀತಿ ಚಿತ್ರಮಂದಿರದಲ್ಲೇ  ಗಂಧದಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅ.21ರಂದು ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ.

Key words: Dr. Raj family-invited – CM Bommai – Gandhagudi -pre-release- event