ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಸೆಪ್ಟೆಂಬರ್,11,2020(www.justkannada.in) : ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಜಾರಿ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ,ವರದಿಯ ಜಾರಿಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

jk-logo-justkannada-logo

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಜಮಾವಣೆಗೊಂಡ ಪ್ರತಿಭಟನಾಕಾರರು ಸರಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್ ಮಾತನಾಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2017ರಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರಕಾರಕ್ಕೆ ನೀಡಿದೆ. ಹಾಗಿದ್ದರೂ, ಅದನ್ನು ಜಾರಿ ಮಾಡುವಲ್ಲಿ ರಾಜ್ಯಸರಕಾರವು ವಿಫಲವಾಗಿದೆ ಎಂದು ಕಿಡಿಕಾರಿದರು.

Dr.Sarojini Mahashi,protests,against,implementation,revised,report

ಲಕ್ಷಾಂತರ ಉದ್ಯೋಗಗಳು ಹೊರರಾಜ್ಯದವರ ಪಾಲು

ರಾಜ್ಯದ ಲಕ್ಷಾಂತರ ಉದ್ಯೋಗ ಹೊರ ರಾಜ್ಯದವರ ಪಾಲಾಗಿದೆ. ಮೂರು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ, ರಾಜ್ಯ ಸರಕಾರಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಾಯಿದೆ ಜಾರಿ ಮಾಡಲಿಲ್ಲ. ವರದಿಯಲ್ಲೇ ಕನ್ನಡಿಗರ ಉದ್ಯೋಗ ಕಳೆದುಹೋಗಿದೆ. ಸದನದಲ್ಲಿ ವರದಿಯನ್ನು ಮಂಡನೆ ಮಾಡಿ ಕಾಯಿದೆಯಾಗಿ ಇದುವರೆಗೂ ಜಾರಿಗೆ ತರಲಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏಕೆ ಬೇಕು?

ಕನ್ನಡಿಗರಿಗೆ ಉದ್ಯೋಗಕ್ಕಾಗಿ ಪರಿಷ್ಕೃತ ವರದಿಯನ್ನು ಜಾರಿಗೆ ತರದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏಕೆ ಬೇಕು? ಪ್ರಾಧಿಕಾರ ಅಧಿಕಾರವಿಲ್ಲದ ಪ್ರಾಧಿಕಾರವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನ್ಯಾಯದ ವಿರುದ್ಧ ಹೋರಾಟ ಮಾಡಿದವರಲ್ಲಿ ಪ್ರಮುಖರು ಎಂಬುದನ್ನು ಮರೆಯದೆ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಿಸುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸೆ.21ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮಂಡನೆ ಮಾಡಿ ಕಾಯಿದೆಯಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಎ.ನಾಗೇಂದ್ರ, ಮೈಸೂರು ವಿಭಾಗ ಸಂಚಾಲಕ ಎನ್.ವೆಂಕಟೇಶ್, ಟಿ.ನರಸೀಪುರ ತಾಲೂಕು ಅಧ್ಯಕ್ಷ ಮಹದೇವ ನಾಯ್ಕ್, ಉಮ್ಮಡಳ್ಳಿ ನಾಗೇಶ್ ಇತರರು ಭಾಗವಹಿಸಿದ್ದರು.

key words : Dr.Sarojini Mahashi-protests-against-implementation-revised-report