ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ಸಂಕಷ್ಟ: ಕಾಮಗಾರಿ ನಿರ್ಮಾಣಕ್ಕೆ ಬಂದವರನ್ನು ತಡೆದ ರೈತರು

ಮೈಸೂರು:ಜೂ-18:(www.justkannada.in) ಸಾಹಸಸಿಂಹ, ದಿ.ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದ್ದು, ಸ್ಮಾರಕ ನಿರ್ಮಾಣಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿ ತಡೆದಿದ್ದಾರೆ.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಮೈಸೂರು ತಾಲೂಕು ಜಯಪುರ ಹೋಬಳಿಯ ಹಾಲಾಳು ಗ್ರಾಮದ ಸರ್ವೇ ನಂಬರ್ 8ರಲ್ಲಿ ಸ್ಮಾರಕ ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿತ್ತು. ಆದರೆ ಸ್ಮಾರಕ ನಿರ್ಮಾಣಕ್ಕೆ ಬಂದಂತಹವರನ್ನು ರೈತರು ತಡೆದ ಹಿನ್ನೆಲೆ ಮತ್ತೆ ಕಾಮಗಾರಿ ಸ್ಥಗಿತಗೊಂಡಿದೆ.

2017ರಲ್ಲಿಯೇ ಸರ್ಕಾರ 5 ಎಕರೆ ಭೂಮಿ ನಿಗದಿ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ಸ್ಮಾರಕ ನಿರ್ಮಾಣ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್​ನಿಂದ ತಡೆ ತಂದವರು ಕೋರ್ಟ್​ಗೆ ನಾಲ್ಕು ಬಾರಿ ಹಾಜರಾಗದ ಹಿನ್ನೆಲೆ ಕೋರ್ಟ್​ ತಡೆಯಾಜ್ಞೆಯನ್ನು ತೆರವುಗೊಳಿಸಿ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿತ್ತು.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ಸಂಕಷ್ಟ: ಕಾಮಗಾರಿ ನಿರ್ಮಾಣಕ್ಕೆ ಬಂದವರನ್ನು ತಡೆದ ರೈತರು
dr vishnuvardhan,memorial,constrction work,trouble again