ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ.

ನವದೆಹಲಿ,ಜುಲೈ,25,2022(www.justkannada.in):  ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ಸ್ವೀಕಾರ ಮಾಡಿದರು.

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ   ನಡೆದ ಸಮಾರಂಭದಲ್ಲಿ  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು  ಪ್ರಮಾಣ ವಚನ ಬೋಧಿಸಿದರು. ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸತ್ತಿನ ಸದಸ್ಯರು ಮತ್ತು ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಭಾಗವಹಿಸಿದ್ದರು.

ದ್ರೌಪದಿ ಮುರ್ಮು ಅವರು ಒಡಿಶಾ ಮೂಲದ ಬುಡಕಟ್ಟು ಸಮುದಾಯದವರು. ಇವರು ಪ್ರತಿಭಾ ಪಾಟೀಲ್ ನಂತರ ರಾಷ್ಟ್ರಪತಿ ಹುದ್ದೇಗೇರಿದ 2ನೇ ಮಹಿಳೆಯಾಗಿದ್ದಾರೆ.

Key words: Draupadi Murmu-sworn – 15th President – India.