ಬರ ಪರಿಹಾರ ವಿಚಾರ: ಸರ್ವಪಕ್ಷ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ- ಸಿಎಂ ಬಿ.ಎಸ್ ಯಡಿಯೂರಪ್ಪ…

Promotion

ಬೆಂಗಳೂರು, ಸೆ.18,2019(www.justkannada.in):  ಬರ ಪರಿಹಾರ ನೀಡುವ ಬಗ್ಗೆ ಪ್ರಧಾನಿ ಮೋದಿ ಮೇಲೆ ವಿಶ್ವಾಸವಿದೆ. ಹೀಗಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಟ್ಟಿಗೆ ಅನುದಾನ ಬಿಡುಗಡೆ ಮಾಡಲಿದೆ. ಪ್ರಧಾನಿಯವರ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ ಎಂದು   ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಬೇರೆ ಯಾವುದೇ ಕಾರ್ಯಕ್ರಮವಿಲ್ಲ. ಹೀಗಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಪ್ರವಾಹ ಪರಿಹಾರದ ವಿಚಾರದಲ್ಲೂ ಕಾಂಗ್ರೆಸ್ ನವರು ರಾಜಕೀಯ ಮಾಡುತ್ತಿದ್ದಾರೆ.  ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ಸರ್ಕಾರ ಮನೆ ನಿರ್ಮಿಸುವ ಕಾರ್ಯ ಆರಂಭವಾಗಿದೆ.  ಮನೆ ಕಟ್ಟಿಸಿಕೊಡಲು ಹಣ ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಸಂತ್ರಸ್ತರ ನೆರವಿಗೆ ಎಲ್ಲ ಕ್ರಮ ಕೈಗೊಂಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Drought Relief –  no need -all-party -delegation- CM BS Yeddyurappa