ಡ್ರಗ್ಸ್ ದಂಧೆ: ತಪ್ಪಿತಸ್ಥರು ಯಾರೇ ಆದ್ರೂ ರಾಜಿಯಾಗುವ ಮಾತೇ ಇಲ್ಲ-ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು, ಸೆಪ್ಟಂಬರ್, 3,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್  ನಂಟು  ಆರೋಪ ಕೇಳಿ ಬಂದ ಹಿನ್ನೆಲೆ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.jk-logo-justkannada-logo

ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು  ಡ್ರಗ್ಸ್ ಜಾಲದ ಬಗ್ಗೆ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.  ಡ್ರಗ್ಸ್ ದಂಧೆ ಪ್ರಕರಣದಲ್ಲಿ ಕೆಲ ನಟ ನಟಿಯರ ಹೆಸರು ಕೇಳಿಬಂದಿದೆ. ಈಗಾಗಲೇ ಕೆಲವರಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಬಿಯೇ ಪ್ರಕರಣ ತನಿಖೆ ನಡೆಸುತ್ತದೆ. ಸದ್ಯಕ್ಕೆ ಎಸ್ ಐಟಿ ರಚನೆ ಮಾಡುವ ಅಗತ್ಯವಿಲ್ಲ ಎಂದು ಸಚಿವ ಸಂಪುಟ ಸಭೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.drugs-cabinet-meeting-home-minister-basavaraja-bommai

ಡ್ರಗ್ಸ್ ನಿಯಂತ್ರಿಸುವ ಸಂಬಂಧ ಸಭೆ ನಡೆಸಿದ್ದೇನೆ. ಡ್ರಗ್ಸ್ ಮಟ್ಟ ಹಾಕಲು ಸಂಪೂರ್ಣ ಅಧಿಕಾರ ನೀಡಿದ್ದೇನೆ. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ,  ಗಡಿಯ ಎಲ್ಲಾ ಎಸ್ಪಿಗಳಿಗೆ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಇನ್ನು ಡ್ರಗ್ಸ್ ದಂಧೆಯಲ್ಲಿ ಯಾರೇ ತಪ್ಪಿತಸ್ಥರಿದ್ದರೂ ರಾಜಿಯಾಗೋ ಮಾತೇ ಇಲ್ಲ.  ಯಾವುದೇ ರಾಜಕೀಯ ಒತ್ತಡವಿದ್ದರೂ ಸಹ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Key words:  Drugs –cabinet -meeting – Home Minister- Basavaraja Bommai.