ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ: ಎಷ್ಟೇ ಪ್ರಭಾವಿಗಳಾಗಿದ್ರೂ ಕ್ರಮ ಖಂಡಿತ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಬೆಳಗಾವಿ,ಸೆಪ್ಟಂಬರ್,8,2021(www.justkannada.in):  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಎಷ್ಟೇ ಪ್ರಭಾವಿಗಳಾಗಿದ್ದರೂ ಖಂಡಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಜೊತೆ ನಟಿ, ನಿರೂಪಕಿ ಅನುಶ್ರೀ  ಹಲವು ಬಾರಿ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಎ2 ಆರೋಪಿ ಕಿಶೋರ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಎಫ್ ಎಸ್ ಎಲ್ ವರದಿ ಬಂದಿರುವುದು ಗೊತ್ತಾಗಿದೆ. ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.

ಅಲ್ಲದೇ, ಪ್ರಕರಣದಲ್ಲಿ ಯಾರನ್ನೂ ಕೈಬಿಡುವ ಪ್ರಶ್ನೆಯೇ ಇಲ್ಲ. ಅಪರಾಧ ಮಾಡಿದ್ರೆ ಕ್ರಮ ಖಂಡಿತ ಆಗುತ್ತೆ. ನಮ್ಮ ರಾಜ್ಯ ಡ್ರಗ್ಸ್ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಂಡಿದೆ. ಪೊಲೀಸರ ಮೇಲೆ ಒತ್ತಡವಿದೆ ಎಂಬುದು ಊಹಾಪೂಹ. ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

Key words: drugs case-No -Soft Corner -Home Minister- Araga Jnanendra.