ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕುವವರೆಗೆ ವಿರಮಿಸುವ ಪ್ರಶ್ನೆಯೇ ಇಲ್ಲ- ನಳೀನ್ ಕುಮಾರ್ ಕಟೀಲ್…

Promotion

ಬೆಂಗಳೂರು,ಸೆಪ್ಟಂಬರ್,5,2020(www.justkannada.in):  ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ಕೆಲ ನಟ ನಟಿಯರ ಹೆಸರು ಕೇಳಿ ಬಂದಿದ್ದು, ಡ್ರಗ್ಸ್ ಜಾಲದ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡ್ರಗ್ಸ್ ದಂಧೆಯನ್ನು ಬುಡ ಸಮೇತ ಕಿತ್ತು ಹಾಕುವವರೆಗೆ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದಿದ್ದಾರೆ.

ಹಾಗೆಯೇ ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.drugs-stop-until-dismantled-bjp-state-president-naleen-kumar-kateel

ಈಗಾಗಲೇ ನಟಿ ಸಂಜನಾ ಆಪ್ತ  ರಾಹುಲ್, ನಟಿ ರಾಗಿಣಿ ಹಾಗೂ ಆಪ್ತ ರವಿಶಂಕರ್ ಎಂಬುವವರನ್ನ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತನಿಖೆ ಮುಂದುವರೆದಿದೆ.

Key words: drugs-stop- until – dismantled- bjp- state –president-Naleen Kumar Kateel.