ಪ್ರತಿ ಜಿಲ್ಲೆಗೆ ವಿಧಿ ವಿಜ್ಞಾನ ಪ್ರಯೋಗಾಲಯ ಚಿಂತನೆ : ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು,ಏಪ್ರಿಲ್,02,2021(www.justkannada.in) :  ರಾಜ್ಯದಲ್ಲಿ ಸೈಬರ್ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ರಾಜ್ಯ ಪೊಲೀಸರು ದಕ್ಷತೆ ಮರೆದಿದ್ದಾರೆ. ಅಪರಾಧ ಪ್ರಕರಣಗಳ ತ್ವರಿತ ಪತ್ತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೊಂದು ವಿಧಿ ವಿಜ್ಞಾನ ಪ್ರಯೋಗಾಲಯ ತೆರೆಯಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Illegally,Sand,carrying,Truck,Seized,arrest,driverಡ್ರಗ್ಸ್ ಜಾಲವನ್ನು ಪತ್ತೆ ಮಾಡುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾಲೇಜು ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ಬಗ್ಗೆ ಪೊಲೀಸ್ ಕಡೆಯಿಂದಲೇ ತರಬೇತಿ ನೀಡುವ ಕಾರ್ಯಕ್ರಮ ಇಲಾಖೆಯಿಂದ ಹಮ್ಮಿಕೊಂಡಿದ್ದೇವೆ ಎಂದರು.CD case-leave-investigate-Minister-Basavaraj Bommai

ನಮ್ಮ ಪೊಲೀಸರು ಯಾವುದೇ ಸವಾಲನ್ನು ಮೆಟ್ಟಿ ನಿಲ್ಲುತ್ತಾರೆ. ಕ್ಲಿಷ್ಟ ಪರಿಸ್ಥಿತಿಯಲ್ಲೂ ಕ್ಷಾಣಾಕ್ಷತೆ ಮರೆದಿದ್ದಾರೆ. ತೀರಾ ಕಷ್ಟಕರ ಪ್ರಕರಣಗಳನ್ನು ಸಹ ನಮ್ಮ ಪೊಲೀಸರು ಬಗೆ ಹರಿಸಿದ್ದಾರೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

key words : each-district-Ritual-Science-Laboratory-Thought-Minister- Basavaraja Bommai