ಬೆಂಗಳೂರು, ಜುಲೈ 31, 2022 (www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವ ಸಾಧ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ರಾಜ್ಯದಲ್ಲಿ 2023ರ ಏಪ್ರಿಲ್ ಬದಲಿಗೆ ಈ ವರ್ಷದ ಡಿಸೆಂಬರ್ ಒಳಗೆ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇಂದಿನ ರಾಜಕೀಯ ಪರಿಸ್ಥಿತಿಯನ್ನು ನೋಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವ ಸಾಧ್ಯತೆ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷ ಅಧಿಕಾರಕ್ಕೆ ಬಂದರೆ ‘ಪಂಚರತ್ನ’ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತೇವೆ. ಒಂದು ವೇಳೆ ಅನುಷ್ಠಾನಗೊಳಿಸಲು ವಿಫಲವಾದರೆ, ಪಕ್ಷವನ್ನು ವಿಸರ್ಜಿಸಿ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು.






