ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನ

Promotion

ಬೆಂಗಳೂರು, ಮಾರ್ಚ್ 05, 2023 (www.justkannada.in) ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಗ್ಗೆ 3.9 ತೀವ್ರತೆಯ ಭೂಕಂಪ ಸಂಭವಿಸಿದೆ.

ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಉತ್ತರದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ಅಧಿಕಾರಿಗಳು ಟ್ವೀಟ್ಟರ್ ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದಾರೆ.

ಯಾವುದೇ ಹಾನಿ ಕುರಿತು ವರದಿ ಲಭ್ಯವಾಗಿಲ್ಲ. ಅಫ್ಘಾನಿಸ್ತಾನ-ತಜಕಿಸ್ತಾನ್ ಪ್ರದೇಶದಲ್ಲಿ ಎರಡು ಭೂಕಂಪಗಳು ವರದಿಯಾದ ಕೆಲವೇ ದಿನಗಳಲ್ಲಿ ಜಮ್ಮು & ಕಾಶ್ಮೀರದಲ್ಲಿ ಭೂಕಂಪನ ಸಂಭವಿಸಿದೆ.