ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಭೂ ಕಂಪನ

Promotion

ಮಹಾರಾಷ್ಟ್ರ, ಮೇ 23, 2021 (www.justkannada.in):  ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದೆ.

ಈ ಸಂಬಂಧ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಮಾಹಿತಿ ನೀಡಿದೆ.

ಇಂದು ಬೆಳಗ್ಗೆ 9.16 ಕ್ಕೆ ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ.

ಅಂದಹಾಗೆ ಮಣಿಪುರದ ಉಕ್ರುಲ್ ನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.