ಶಿವಸೇನಾ ಸಂಸದ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

Promotion

ಬೆಂಗಳೂರು, ಜುಲೈ 31, 2022 (www.justkannada.in): ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಮನೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಭಾನುವಾರ ಶೋಧ ಕಾರ್ಯ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಎರಡು ಬಾರಿ ಸಮನ್ಸ್ ತಪ್ಪಿಸಿದ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಸಮನ್ಸ್ ತಪ್ಪಿಸಿಕೊಂಡಿದ್ದ ರಾವತ್ ರನ್ನು ನಂತರ ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.

ಹಣಕಾಸು ವರ್ಗಾವಣೆ ಸಂಬಂಧಿತ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಶ್ನಿಸಲು ಬಯಸಿದ್ದಾರೆ.

ಉದ್ಧವ್ ಠಾಕ್ರೆ ಶಿಬಿರದಲ್ಲಿರುವ ಶಿವಸೇನೆ ಸಂಸದ ಸಂಜಯ್ ರಾವುತ್ ಈ ಆರೋಪವನ್ನು ನಿರಾಕರಿಸಿದ್ದು, ರಾಜಕೀಯ ದ್ವೇಷದ ಕಾರಣ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.