ಇಡಿ ಸಮನ್ಸ್ ಹಿನ್ನೆಲೆ; ದೆಹಲಿಗೆ ತೆರಳಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ..

Promotion

ಬೆಂಗಳೂರು,ಸೆ,11,2019(www.justkannada.in):  ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ದೆಹಲಿಗೆ ತೆರಳಿದ್ದಾರೆ.

ಸೆಪ್ಟಂಬರ್ 12 ರಂದು(ನಾಳೆ) ವಿಚಾರಣೆಗೆ ಹಾಜರಾಗುವಂತೆ ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಸಮನ್ಸ್ ನೀಡಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗಲು ಐಶ್ವರ್ಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ.

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಸೆಪ್ಟಂಬರ್ 13 ರಂದು ಅಂತ್ಯಗೊಳ್ಳಲಿದ್ದು ಅಂದೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

Key words: ED summons-  – former minister -DK Shivakumar – daughter -dehli