ಮಾತೃಭಾಷಾ ಮಾಧ್ಯಮದಲ್ಲಿಯೇ ಶಿಕ್ಷಣದ ಬಗ್ಗೆ ಸುಪ್ರೀಂಕೋರ್ಟ್ ಪ್ರತಿಪಾದನೆ ಸ್ವಾಗತಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…

ಬೆಂಗಳೂರು,ಅಕ್ಟೋಬರ್,7,2020(www.justkannada.in): ಮಕ್ಕಳಿಗೆ ಮಾತೃಭಾಷಾ ಮಾಧ್ಯಮದಲ್ಲಿಯೇ ಶಿಕ್ಷಣ ನೀಡುವುದು ಅಗತ್ಯ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿರುವುದನ್ನು ನಾನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.jk-logo-justkannada-logo

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಭಾಷೆಯೊಂದಿಗೆ ಸಂಸ್ಕೃತಿಯೂ ಸಮ್ಮಿಳಿತವಾಗಿರುತ್ತದೆ. ಮಾತೃ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿ, ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಮಾತೃಭಾಷೆಯಲ್ಲಿ ಶಿಕ್ಣಣ ನೀಡುವುದರಿಂದ ಅವರ ಜ್ಞಾನಾರ್ಜನೆಗೆ ಅನುಕೂಲವಾಗುವುದಲ್ಲದೇ ಭಾಷೆಯ ಉಳಿವು ಮತ್ತು ಬೆಳವಣಿಗೆಗೂ ಕಾರಣವಾಗುತ್ತದೆ ಎಂದಿದ್ದಾರೆ.educate-mother-tongue-necessary-supreme-courts-speaker-welcome-vishweshwar-hegde-kageri

ಅಲ್ಲದೆ  ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ನಮ್ಮ ಹಕ್ಕಾಗಿದ್ದು, ಸುಪ್ರೀಂಕೋರ್ಟ್ ಈ ನಿಟ್ಟಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

Key words: educate – mother tongue- necessary -Supreme Court’s – speaker –welcome-Vishweshwar Hegde Kageri.