ಕೊರೋನಾ ಹೆಚ್ಚಾದರೇ ಶಾಲೆಗಳ ಬಂದ್ ಬಗ್ಗೆ ಸುಳಿವು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್.

Promotion

ಬೆಂಗಳೂರು,ಡಿಸೆಂಬರ್,6,2021(www.justkannada.in):  ಕೋವಿಡ್ ರೂಪಾಂತರಿ ಒಮಿಕ್ರಾನ್  ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದ್ದು ಇದೀಗ ಭಾರತಕ್ಕೂ ಕಾಲಿಟ್ಟಿದ್ದು ರಾಜ್ಯಕ್ಕೂ ವಕ್ಕರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದರೇ ಶಾಲೆಗಳನ್ನ ಬಂದ್ ಮಾಡಲು ಸರ್ಕಾರ ಸಿದ್ಧವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ ಮತ್ತು ನವೋದಯ ಶಾಲೆಗಳಲ್ಲಿ ಎಂದಿದ್ದಾರೆ.

ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ.  ಇಂದು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ನೀತಿ ಸಂಹಿತೆ ಮುಗಿದ ಬಳಿಕ ನಾನು ಸೋಂಕಿತ ವಸತಿ ಮತ್ತು ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ ಎಂದು ತಿಳಿಸಿದರು.

ಹಾಗೆಯೇ ಪರೀಕ್ಷೆ ವೇಳೆ ಕೊರೋನಾ ಹೆಚ್ಚಾದ್ರೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆ ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಸದ್ಯಕ್ಕೆ ಸಮಸ್ಯೆ ಇಲ್ಲ ಆತಂಕ ಬೇಡ. ಒಮಿಕ್ರಾನ್ ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರಲ್ಲ. ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದರೂ ಸರ್ಕಾರ ಸಿದ್ಧವಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

Key words: Education Minister -BC Nagesh-hinted – large – corona- schools