ಮಂಡ್ಯ,ಜನವರಿ,10,2021(www.justkannada.in) : ಚುನಾವಣೆ ಘೋಷಣೆಯಾಗಲಿ, ಎಲ್ಲವನ್ನು ಹೇಳುತ್ತೇನೆ ಎಂದು ಮುಂದಿನ ಯೋಜನೆಗಳು ಹಾಗೂ ಚುನಾವಣೆಗೆ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನೇರಳಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಒಂದು ವರ್ಷದೊಳಗೆ ರಾಜ್ಯದಲ್ಲಿ 5ಲಕ್ಷ ಮನೆ ನಿರ್ಮಾಣ ಮಾಡಲಾಗುವುದು. ಎರಡನೇ ವರ್ಷದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮುಖ್ಯ ಕೇಂದ್ರದಲ್ಲಿ ಒಂದು ಪಬ್ಲಿಕ್ ಶಾಲೆ ಆರಂಭಿಸಲಾಗುವುದು ಎಂದಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು. 5600 ಗ್ರಾಪಂ ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. ಆಸ್ಪತ್ರೆಗಳಿಗೆ ಅಗತ್ಯವಾದ ಸಿಬ್ಬಂದಿ ನೇಮಿಸಲಾಗುವುದು. ಚುನಾವಣೆ ಘೋಷಣೆಯಾಗಲಿ, ಎಲ್ಲವನ್ನು ಹೇಳುತ್ತೇನೆ ಎಂದು ಈಗಲೇ ಮುಂದಿನ ಯೋಜನೆಗಳು, ಚುನಾವಣೆಗೆ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗಳಿಗೆ ಅಗತ್ಯವಾದ ಸಿಬ್ಬಂದಿ ನೇಮಿಸಲಾಗುವುದು. ಚುನಾವಣೆ ಘೋಷಣೆಯಾಗಲಿ, ಎಲ್ಲವನ್ನು ಹೇಳುತ್ತೇನೆ ಎಂದು ಈಗಲೇ ಮುಂದಿನ ಯೋಜನೆಗಳು, ಚುನಾವಣೆಗೆ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.
key words : Election-announced-Everything-Say-Former CM-H.D.Kumaraswamy
 
            