ಎರಡು ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದ ಚುನಾವಣಾ ಆಯೋಗ..

Promotion

ನವದೆಹಲಿ, ಮೇ,7,2019(www.justkannada.in): ಲೋಕಸಭಾ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂಬ ಆರೋಪದ ಮೇಲೆ ದಾಖಲಾಗಿದ್ದ  ಎರಡು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.

ಪ್ರಧಾನಿ ಮೋದಿ ಅವರಿಗೆ 8 ಮತ್ತು 9ನೇ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಗುಜರಾತಿನ ಅಹ್ಮದಾಬಾದಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ  ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು.

ಹಾಗೆಯೇ ಕರ್ನಾಟಕದ ಚಿತ್ರದುರ್ಗದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಏ.9 ರಂದು  ನಡೆದ ಸಮಾವೇಶದಲ್ಲಿ ಮಾತನಾಡುತ್ತಿದ್ದ ಮೋದಿ, ಮತದಾರರು ಬಾಲಕೋಟ್ ಏರ್ ಸ್ಟ್ರೈಕ್ ನಡೆಸಿದ ಸೈನಿಕರಿಗೆ ಮತ ನೀಡಿ ಎಂದು ಕೇಳುವ ಮೂಲಕ ಸೇನೆಯ ಸಾಧನೆಯ ಶ್ರೇಯಸ್ಸನ್ನು ಪಡೆಯಲು ಯತ್ನಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಚುನಾವಣಾ  ಆಯೋಗ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.

Key words: Election Commission – clean chit – Prime Minister -Modi – two cases