ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್  ಪಲ್ಟಿ: ಮೂವರಿಗೆ ಗಂಭೀರ ಗಾಯ.

ವಿಜಯಪುರ,ಮೇ,2,2023(www.justkannada.in):  ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ  ಸರ್ಕಾರಿ ಬಸ್ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ  ಘಟನೆ ವಿಜಯಪುರದಲ್ಲಿ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. 50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.  ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words:  election –duty- training – bus – overturned-vijayapur