ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ…

kannada t-shirts

ಬೆಂಗಳೂರು,ಅಕ್ಟೋಬರ್,26,2020(www.justkannada.in): ಅಕ್ಟೋಬರ್ 28 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.jk-logo-justkannada-logo

ಇಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 28ರ ಸಂಜೆ 6 ಗಂಟೆವರೆಗೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶಿಸಿದ್ದಾರೆ. ಹೀಗಾಗಿ 48 ಗಂಟೆಗಳ ಕಾಲ ಮದ್ಯಪ್ರಿಯರಿಗೆ ಮದ್ಯ ಸಿಗುವುದಿಲ್ಲ.election-liquor-sales-ban-two-days-bengaluru

ಅಕ್ಟೋಬರ್ 28 ರಂದು ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದ ಚುನಾವಣೆ ಇದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಹೀಗಾಗಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎನ್ನಲಾಗಿದೆ.

Key words: election- Liquor –sales- ban-two days- Bengaluru

 

website developers in mysore