ನೂತನ ಸ್ಪೀಕರ್ ನೇಮಕ್ಕೆ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ..

Promotion

ಬೆಂಗಳೂರು,ಜು,30,2019(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಈ ಹಿನ್ನೆಲೆ ನಾಳೆ ನಡೆಯಲಿರುವ ನೂತನ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ನಾಮಪತ್ರ ಸಲ್ಲಿಸಿದರು.

ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸಮತಯಾಚನೆ ಸಾಬೀತುಪಡಿಸಿದ ಬಳಿಕ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಕಲಾಪ ಮುನ್ನಡೆಸಿದ ಡೆಪ್ಯೂಟಿ ಸ್ಪೀಕರ್ , ಜುಲೈ31 ರಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಿ ಕಲಾಪ ಮುಂದೂಡಿದರು.

ಈ ಮಧ್ಯೆ ಬಿಜೆಪಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಕೆ.ಜಿ ಬೋಪಯ್ಯ, ಜಗದೀಶ್ ಶೆಟ್ಟರ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರು ಕೇಳಿ ಬಂದಿತ್ತು. ದಿಢೀರ್ ಬದಲಾವಣೆಯಿಂದಾಗಿ ಕೆ.ಜಿ ಬೊಪಯ್ಯ ಬದಲು ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರನ್ನ ಅಂತಿಮಗೊಳಿಸಲಾಗಿತ್ತು.

ಇದೀಗ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್, ಬಸವರಾಜಬೊಮ್ಮಾಯಿ, ಮಾಧುಸ್ವಾಮಿ ಉಪಸ್ಥಿತರಿದ್ದರು.

Key words: Election -new Speaker-BJP candidate -Vishweshwara Hegde Kageri – nomination file