ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆ: ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ಡಿಸಿಗಳಿಗೆ ಸೂಚನೆ.

Promotion

ಬೆಂಗಳೂರು,ಮಾರ್ಚ್,24,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಬಹುದು. ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ ಎನ್ನಲಾಗುತ್ತಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ.

Key words: election –schedule- Election Commission-Instructions – DC