ಉಪರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿಯಿಂದ ಮತದಾನ.

ನವದೆಹಲಿ,ಆಗಸ್ಟ್,6,2022(www.justkannada.in): ಭಾರತದ ನೂತನ ಉಪ ರಾಷ್ಟ್ರಪತಿ ಆಯ್ಕೆಗೆ  ಇಂದು ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.

ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ , ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸದಿದ್ದಾರೆ. ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯುತ್ತಿದೆ.

ಸಂಸತ್ ಭವನದಲ್ಲಿ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

Key words: Election -Vice President- Voting -Prime Minister -Modi.