ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ: ಇದೊಂದು ಎಚ್ಚರಿಕೆಯ ಗಂಟೆ ಎಂದ ಆರ್.ಧೃವನಾರಾಯಣ್.

ಮೈಸೂರು,ಮಾರ್ಚ್,10,2022(www.justkannada.in):  ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಗೋವಾ, ಉತ್ತರಖಂಡ್ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ.

ಈ ಚುನಾವಣೆ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಇದೊಂದು ಎಚ್ಚರಿಕೆಯ ಗಂಟೆಯಾಗಿದೆ. ಈ ಫಲಿತಾಂಶವನ್ನ ರಾಜ್ಯ ನಾಯಕರು ಗಂಭೀರವಾಗಿ ಪರಿಗಣಿಸಬೇಕು‌. ಚುನಾವಣೆ ಸೋಲಿನ ಬಗ್ಗೆ ಪರಾಮರ್ಶೆ ಅಗತ್ಯ ಎಂದರು.

ಬಿಜೆಪಿಯ ತಂತ್ರಗಾರಿಕೆಗೆ ಕಾಂಗ್ರೆಸ್ ಕೂಡ ಪ್ರತಿತಂತ್ರ ರೂಪಿಸಬೇಕು. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಕೂಡ ಬಾಕಿ‌ ಇದ್ದು, ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಎಚ್ಚೆತ್ತುಕೊಳ್ಳಬೇಕಿದೆ.ಬಿಜೆಪಿ ಕೇವಲ ಚುನಾವಣೆ ಸಂದರ್ಭದಲ್ಲಿ ತಂತ್ರಗಾರಿಕೆ ಮಾಡುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಅವರಿಗೆ ಆಸಕ್ತಿ ಇಲ್ಲ. ಸೋಲಿನ ಜವಾಬ್ದಾರಿಯನ್ನ ಆಯಾ ರಾಜ್ಯದ ನಾಯಕರೇ ಹೊರಬೇಕಿದೆ ಎಂದು ಆರ್. ಧ್ರುವನಾರಾಯಣ್ ಹೇಳಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ಅಗತ್ಯವಿಲ್ಲ. ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಎಂದೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಹುಲ್‌ ಗಾಂಧಿ ಬೇಕಿದ್ದರೆ ಉಪ ಪ್ರಧಾನಿ ಆಗಬಹುದಿತ್ತು. ವಿನಾಕಾರಣ ಬಿಜೆಪಿ ನಮ್ಮ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡಿದೆ. ಮುಂದಿನ ಚುನಾವಣೆಯನ್ನೂ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಸಲಿದ್ದೇವೆ ಎಂದು ಆರ್.ಧ್ರುವನಾರಾಯಣ್ ತಿಳಿಸಿದರು.

Key words: election-warning-congress