Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ : ಮಮತಾ ಬ್ಯಾನರ್ಜಿ ಮೇಲಿನ ದಾಳಿಗೆ ಹೆಚ್.ಡಿಕೆ ಖಂಡನೆ…

ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ : ಮಮತಾ ಬ್ಯಾನರ್ಜಿ ಮೇಲಿನ ದಾಳಿಗೆ ಹೆಚ್.ಡಿಕೆ ಖಂಡನೆ…

ಬೆಂಗಳೂರು,ಮಾರ್ಚ್,11,2021(www.justkannada.in) : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ. ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.Elections,Democratically,Must,violence,Not,Former CM,H.D.Kumaraswamyಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು. ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ ಎಂದಿದ್ದಾರೆ.

ನಾನು ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕಿರುವೆ

Elections,Democratically,Must,violence,Not,Former CM,H.D.Kumaraswamy

ಹೀಗಾಗಿ, ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

key words : Elections-Democratically-Must-violence-Not-Former CM-H.D.Kumaraswamy