ಉಚಿತದ ಜೊತೆಯಲ್ಲೇ ಜುಲೈ 1ರಿಂದ ವಿದ್ಯುತ್ ದರ ಏರಿಕೆ ಆದೇಶ

kannada t-shirts

ಬೆಂಗಳೂರು, ಜೂನ್ 04, 2023 (www.justkannada.in): ಜುಲೈ 1ರಿಂದ ವಿದ್ಯುತ್ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ.

ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ.

ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.

ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಈ ಆದೇಶವು ಎಲ್ಲಾ ಎಸ್ಕಾಮ್ಗಳಿಗೆ ಅನ್ವಯಿಸುತ್ತದೆ. ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

website developers in mysore