ಕೆಲಸ ಮಾಡುವ ವೇಳೆ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು..

Promotion

ಮೈಸೂರು,ಸೆ,9,2019(www.justkannada.in): ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರಿನ ನಂಜನಗೂಡು ತಾಲ್ಲೂಕಿನ ಮಹಾದೇವ ನಗರದಲ್ಲಿ ಈ ಘಟನೆ ಸಂಭವಿಸಿದೆ. ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬಸವ (35) ಮೃತಪಟ್ಟ ಲೈನ್ ಮ್ಯಾನ್.

ಬಸವ ಗುತ್ತಿಗೆ ಆಧಾರದಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಬದನವಾಳು ಕೆಇಬಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಸವ ಇಂದು ಮಹದೇವನಗರದಲ್ಲಿ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕವಲಂದೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Electricity- shock-lineman -death – mysore