‘ಚಾಲೆಂಜಿಂಗ್ ಸ್ಟಾರ್ ಪತ್ನಿ’ಗೆ ‘ಉದಯೋನ್ಮುಖ ಮಹಿಳಾ ಉದ್ಯಮಿ’ ಪ್ರಶಸ್ತಿ

Promotion

ಬೆಂಗಳೂರು, ಅಕ್ಟೋಬರ್ 13, 2020 (www.justkannada.in): ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೈ ಫ್ರೆಶ್ ಬಾಸ್ಕೆಟ್’ ಎಂಬ ಆನ್ ಲೈನ್ ಮೂಲಕ ತಾಜಾ ತರಕಾರಿಗಳನ್ನ, ರೈತರಿಂದ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದಾರೆ.

ದರ್ಶನ್ ಪತ್ನಿಯ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ವಿಜಯಲಕ್ಷ್ಮಿ ಆರಂಭಿಸಿರುವ ಆನ್‍ಲೈನ್ ಉದ್ಯಮಕ್ಕೆ ಸಂಬಂಧಪಟ್ಟಂತೆ ಅವರಿಗೆ ಪ್ರಶಸ್ತಿಯೂ ಲಭಿಸಿದೆ.

ವಿಜಯಲಕ್ಷ್ಮಿ ಅವರಿಗೆ ಟೈಮ್ಸ್ ಬ್ಯುಸಿನೆಸ್​ನವರು ಉದಯೋನ್ಮುಖ ಮಹಿಳಾ ಉದ್ಯಮಿ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂತೋಷವನ್ನು ಹಂಚಿಕೊಂಡಿದ್ದಾರೆ.