ಕರ್ನಾಟಕದಲ್ಲಿ ‘ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ‌ ಆದ್ಯತೆ’: ಅಭಿಯಾನಕ್ಕೆ ಸಿಎಂ ಹೆಚ್ ಡಿಕೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಬೆಂಬಲ…

ಬೆಂಗಳೂರು,ಮೇ,6,2019(www.justkannada.in): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ‌ ಆದ್ಯತೆ  ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮೇ 4 ರಂದು ಸಂಜೆ 6 ಗಂಟೆಗೆ #karnatakaJobsForKannadigas ಎಂಬ ಆ್ಯಶ್ ಟಾಗ್ ನಲ್ಲಿ  ಆರಂಭವಾದ ಈ ಅಭಿಯಾನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವರಾದ ಜಿ‌.ಟಿ.ದೇವೇಗೌಡ ಮುಂತಾದ ಗಣ್ಯರು ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.Employment – first- priority - Kannadigas - Karnataka.- campaign Support - CM HDK - former CM Siddaramaiah.

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಮೊದಲ ಆದ್ಯತೆ ಕನ್ನಡಿಗರಿಗೆ ಸಿಗಬೇಕು. ಐಬಿಪಿಎಸ್ ಪರೀಕ್ಷೆಯಲ್ಲಿ ಕರ್ನಾಟಕದ ಬ್ಯಾಂಕ್ ಹುದ್ದೆಗಳಿಗೆ ಕನ್ನಡ ಕಡ್ಡಾಯ ಕಾಯ್ದೆ ಜಾರಿ ಮಾಡಬೇಕು. ನಮ್ಮ ರೈತರ ಜಾಗದಲ್ಲಿ ಕಟ್ಟಿರುವ ಐಟಿ ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ದೊರಕಬೇಕು ಎಂಬ ಧ್ಯೇಯೋದ್ದೇಶದಿಂದ ಈ ಅಭಿಯಾನ ಆರಂಭಿಸಲಾಗಿದೆ.

ಈ ಸಮಸ್ಯೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ದೊಡ್ಡ ಮಟ್ಟದ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಮುಂದಾಗಿವೆ.   ಮಾಧ್ಯಮಗಳಲ್ಲೂ ಈ ಅಭಿಯಾನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಹಲವಾರು ಟಿವಿ ಚಾನೆಲ್ ಗಳು ಡಿಬೇಟ್ ಮಾಡಿವೆ.

Key words: Employment – first- priority – Kannadigas – Karnataka.- campaign Support – CM HDK – former CM Siddaramaiah.