ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ: ಟೀಂ ಇಂಡಿಯಾ ಮತ್ತೊಂದು ಶಾಕ್

Promotion

ಬೆಂಗಳೂರು, ಜುಲೈ 23, 2021 (www.justkannada.in): ಶುಬ್ಮನ್ ಗಿಲ್ ಮತ್ತು ಅವೇಶ್ ಖಾನ್, ನಂತರ ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದಾರೆ.

ಹೌದು. ಆಗಸ್ಟ್ 4ರಿಂದ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.

ಗಾಯದ ಕಾರಣ ವಾಷಿಂಗ್ಟನ್ ಸುಂದರ್, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.  ಈಗ ಸುಂದರ್ ಮತ್ತು ಅವೇಶ್ ಖಾನ್ ಇಬ್ಬರೂ ಬೆರಳಿನ ಗಾಯದಿಂದಾಗಿ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ.

ಕೌಂಟಿ ಸೆಲೆಕ್ಟ್ ಇಲೆವೆನ್ ಪರ ಆಡುವಾಗ ವಾಷಿಂಗ್ಟನ್ ಸುಂದರ್ ಕೇವಲ 1 ರನ್ ಗಳಿಸಿದ್ದರು. ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್ ಪ್ರವಾಸದಿಂದ ನಿರ್ಗಮಿಸುವುದು ಭಾರತಕ್ಕೆ ದೊಡ್ಡ ಹೊಡೆತ ಎಂದು ವಿಶ್ಲೇಷಿಸಲಾಗುತ್ತಿದೆ.