ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ- ಡಿಸಿಎಂ ಡಿ.ಕೆ ಶಿವಕುಮಾರ್.

Promotion

ಬೆಂಗಳೂರು,ಜೂನ್,5,2023(www.justkannada.in): ಇಂದು ವಿಶ್ವ ಪರಿಸರ ದಿನ ಹಿನ್ನೆಲೆ ಬೆಂಗಳೂರಿನ ರಾಚೇನಹಳ್ಳಿ ಕೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗಿಡ ನೆಟ್ಟು ನೀರು ಹಾಕುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರನ್ನು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ. ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಕೃಷ್ಣ ಭೈರೇಗೌಡ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿ ಹಲವರು ಭಾಗಿಯಾಗಿದ್ದರು.

Key words: environment day-  DCM -DK Shivakumar-bangalore