ಆರ್‘ಎಸ್’ಎಸ್ ಟೀಕಿಸಿದ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಆಕ್ರೋಶ

ಬೆಂಗಳೂರು, ಮೇ 27, 2022 (www.justkannada.in): ಸ್ಥಾನಮಾನಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಇಂಥವರು ಪ್ರಧಾನಿ,  ಆರ್.ಎಸ್.ಎಸ್. ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

, ನೆಹರೂ ಮತ್ತು ಮೋದಿ ಅವರನ್ನು ಹೋಲಿಕೆ ಮಾಡಿ ನೀಡಿದ ಹೇಳಿಕೆ ಹಾಗೂ ಆರ್.ಎಸ್.ಎಸ್. ಸಂಘಟನೆ ವಿದೇಶಿ ಸಂಘಟನೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿದ್ದಾರೆ.

ಆರ್.ಎಸ್.ಎಸ್. ಸ್ವಾತಂತ್ರ್ಯ ಪೂರ್ವದಿಂದಲೂ ರಾಷ್ಟ್ರಭಕ್ತರನ್ನು ನಿರ್ಮಾಣ ಮಾಡಲು ಮತ್ತು ಹಿಂದುತ್ವ ಉಳಿಸಲು ಶ್ರಮಿಸುತ್ತಿದೆ. ಕೂಡಲೇ ಸಿದ್ಧರಾಮಯ್ಯ ಅವರು ಜನರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಅಲೆಮಾರಿ ಸಿದ್ಧರಾಮಯ್ಯ ಅಧಿಕಾರಕ್ಕೋಸ್ಕರ ಒಂದ್ಸಲ ಚಾಮುಂಡೇಶ್ವರಿ, ಇನ್ನೊಮ್ಮೆ ಬಾದಾಮಿ. ಈಗ ಅಲ್ಲಿಯೂ ಸೋಲುವ ಭೀತಿಯಿಂದ ಜಮೀರ್ ಅಹ್ಮದ್ ಕ್ಷೇತ್ರಕ್ಕೆ ಹೋಗ್ತಾರೆ ಎಂದು ಟೀಕಿಸಿದ್ದಾರೆ.

ಸೋನಿಯಾ ವಿದೇಶಿಯರು. ಇಂದು ಕಾಂಗ್ರೆಸ್ ಇಟಲಿ ಪ್ರೇರಿತ ನಾಯಕತ್ವದ ಹಿಡಿತದಲ್ಲಿದೆ. ಹಿಂದೆ ಜೆಡಿಎಸ್ ನಲ್ಲಿದ್ದ ಸಿದ್ಧರಾಮಯ್ಯ ಅಧಿಕಾರಕ್ಕಾಗಿ ಕಾಂಗ್ರೆಸ್ ಗೆ ಹೋಗಿದ್ದಾರೆ. ಅವರು ಆರ್.ಎಸ್.ಎಸ್. ಬಗ್ಗೆ ಮಾತನಾಡಲು ಅಯೋಗ್ಯರು ಎಂದಿದ್ದಾರೆ.