ಕುಂಬಾರ ಸಮುದಾಯಕ್ಕೆ ಸಿಹಿ ಸುದ್ದಿ! ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು, ಮಾರ್ಚ್ 19, 2023 (www.justkannada.in): ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಶನಿವಾರ ಸರ್ಕಾರ ಆದೇಶ ಹೊರಡಿಸಿದೆ.

ಹೌದು. ರಾಜ್ಯ ಸರ್ಕಾರ ಕುಂಬಾರ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದೆ. ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಈ ನಿಗಮ ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.