ಕೊರೋನಾ ಹೆಚ್ಚಳ ಹಿನ್ನೆಲೆ ಎಲ್ಲರೂ ಬೂಸ್ಟರ್ ಡೋಸ್ ಪಡೆಯಿರಿ- ಸಚಿವ ಸುಧಾಕರ್ ಮನವಿ.

Promotion

ಚಿಕ್ಕಬಳ್ಳಾಪುರ. ಆಗಸ್ಟ್,12,2022(www.justkannada.in): ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಎಲ್ಲರೂ ಬೂಸ್ಟರ್ ಡೋಸ್ ಲಸಿಕೆ ಪಡೆಯಿರಿ ಎಂದು ಆರೋಗ್ಯ ಸಚಿವ ಡಾಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಶೇ.17 ರಷ್ಟು ಮಂದಿ ಮಾತ್ರ ಬೂಸ್ಟರ್ ಡೋಸ್  ಪಡೆದಿದ್ದಾರೆ. ಕೊರೋನಾ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ.  ಸಮರೋಪಾದಿಯಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡ್ತೇವೆ. ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯ ಆಗಲಿದೆ ಎಂದರು.

ಕೊರೋನಾ ಹೆಚ್ಚಳ ಹಿನ್ನೆಲೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Everyone – booster dose – increase – Corona-Minister -Sudhakar