ಚಾ.ನಗರದಲ್ಲಿ ಧ್ರುವನಾರಾಯಣ್’ಗೆ ಸೋಲು: ಮೈಸೂರಿನಲ್ಲಿ ಗೌಪ್ಯ ಸಭೆ ನಡೆಸಿ ಮಾಜಿ ಸಿಎಂ ಸಿದ್ದರಾಮಯ್ಯ

Promotion

ಮೈಸೂರು, ಜೂನ್ 23,2019 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ.

ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ವರುಣಾ ಕ್ಷೇತ್ರ ಬರುವುದರಿಂದ, ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ ಅವರಿಗೆ ಕಡಿಮೆ ಮತಗಳು ಬಂದಿದೆ. ಇದರಿಂದ ಆರ್. ಧ್ರುವನಾರಾಯಣ ಸೋಲು ಕಂಡಿರುವ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್‌ವೊಂದರಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನ ಕ್ಷೇತ್ರದ ಕಾಂಗ್ರೆಸ್ ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರನ್ನು ಕರೆದು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.