ನಂಬಿಕೆ ವಿಷಯ ಎತ್ತಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಬಿಜೆಪಿ ಯತ್ನ: ಮಾಜಿ ಸಿಎಂ ಸಿದ್ದರಾಮಯ್ಯ

Promotion

ಬೆಂಗಳೂರು, ಏಪ್ರಿಲ್ 03, 2022 (www.justkannada.in): ರಾಜ್ಯದಲ್ಲಿ ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದ ಹಲಾಲ್ ನಡೆದುಕೊಂಡು ಬಂದಿದೆ. ಅವರ ನಂಬಿಕೆಯಂತೆ ಅವರು ಮಾಡಿಕೊಳ್ಳಲಿ ಬಿಟ್ಟುಬಿಡಿ ಎಂದು ಮಾಜಿ ಸಿಎಂ ಸಲಹೆ ನೀಡಿದ್ದಾರೆ.

ಸಾವಿರಾರು ವರ್ಷಗಳಿಂದ ಹಲಾಲ್ ನಡೆದುಕೊಂಡು ಬಂದಿದೆ. ಅವರ ನಂಬಿಕೆಯಂತೆ ಅವರು ಮಾಡಿಕೊಳ್ಳಲಿ ಬಿಟ್ಟುಬಿಡಿ. ನಾವು ಜಾತ್ರೆಗಳಲ್ಲಿ ಮರಿ ಕಡಿಯುವುದಿಲ್ಲವಾ? ಅನಗತ್ಯ ವಿಚಾರಕ್ಕೆ ಶಾಂತಿ ಹಾಳು ಮಾಡುವ ಕೆಲಸ ಮಾಡಬೇಡಿ ಎಂದು ತಿಳಿಸಿದ್ದಾರೆ.

ಜನರಿಗೆ ಅಗತ್ಯವಿರುವ ವಿಚಾರಗಳ ಬಗ್ಗೆ ಚರ್ಚೆ ಮಾಡಿ. ಮನುಷ್ಯನ ಬದಕಿಗೆ ಬೇಕಾಗುವ ವಿಷಯಗಳ ಬಗ್ಗೆ ಮಾತನಾಡಿ. ನಂಬಿಕೆಯ ಕುರಿತ ವಿಷಯಗಳನ್ನು ಎತ್ತಿ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.