ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲು ಜನಾರ್ದನ ರೆಡ್ಡಿ ಪುತ್ರ ರೆಡಿ !

Promotion

ಬೆಂಗಳೂರು, ಜನವರಿ 08, 2022 (www.justkannada.in): ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಹೌದು. ಡೈರೆಕ್ಟರ್ ರಾಧಾಕೃಷ್ಣ ನಿರ್ದೇಶನದ ಸಿನಿಮಾ ಮೂಲಕ ಕಿರೀಟಿ ರೆಡ್ಡಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸ್ಯಾಂಡಲ್ ವುಡ್ ಗೆ ಪಾದರ್ಪಣೆ ಮಾಡುತ್ತಿದ್ದಾರೆ.

ನಿರ್ದೇಶಕ ರಾಧಾಕೃಷ್ಣ ಕನ್ನಡದಲ್ಲಿ ಮಾಯಾಬಜಾರ್ ಚಿತ್ರವನ್ನು ನಿರ್ದೇಶಿಸಿದ್ದರು. ಮೂಲಗಳ ಪ್ರಕಾರ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಕಿರೀಟಿ ಈಗಾಗಲೇ ನಟನೆ, ನೃತ್ಯ, ಫೈಟಿಂಗ್ ಜೊತೆಗೆ ಮಾರ್ಷಲ್ ಆರ್ಟ್‌ಗಳಲ್ಲಿ ತರಬೇತಿ ಪಡೆದಿದ್ದಾರೆ.  ಯುದ್ಧ ಶರಣಂ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಸಾಯಿ ಕೊರ್ರಪಾಟಿ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.