ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್ ನಿಧನ

Promotion

ಹಾಸನ, ಆಗಸ್ಟ್ 1, 2021 (www.justkannada.in): ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ಎಂ. ಆನಂದ್ (72) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ವೃತ್ತಿಯಲ್ಲಿ ವಕೀಲರಾಗಿದ್ದ ಅವರು ಮೂರು ದಶಕಗಳ ಹಿಂದೆ ಕಾಂಗ್ರೆಸ್ ಸೇರಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2004-2010 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು.

1996ರಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

ಹಾಸನ ಗುರು ಚಿತ್ರ ಮಂದಿರದ ಹಿಂಭಾಗದ ಅವರ ಸ್ವಗೃಹ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಸಂಜೆ ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.