ಆತ್ಮಕಥೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಕೈ ನಾಯಕರ ವಿರುದ್ಧ ಮೋಟಮ್ಮಅಸಮಾಧಾನ

Promotion

ಬೆಂಗಳೂರು, ಜೂನ್ 12, 2022 (www.justkannada.in): ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೋಟಮ್ಮ ಅವರ ಆತ್ಮಕಥೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಹೌದು.  ಮಾಜಿ ಸಚಿವೆ ಮೋಟಮ್ಮ ಅವರು ಬರೆದಿರುವ ‘ಬಿದಿರು ನೀನ್ಯಾರಿಗಲ್ಲದವಳು’ ಹೆಸರಿನ ಆತ್ಮಕತೆ ಲೋಕಾರ್ಪಣೆಗೊಂಡಿದೆ. ಇದರಲ್ಲಿ ಮಾಜಿ ಸಿಎಂ ಸೇರಿದಂತೆ ಹಲವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆತ್ಮಕತೆ ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್​ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆತ್ಮಕತೆ ಲೋಕಾರ್ಪಣೆಗೊಳಿಸಿದ್ದರು.

ಆತ್ಮಕತೆಯ ‘ಬಿಸಿಲುಗುದುರೆ ಬೆನ್ನೇರಿ’ ಎಂಬ ಭಾಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮೋಟಮ್ಮ ಅಸಮಾಧಾನ ಹೊರಹಾಕಿದ್ದಾರೆ. ನನ್ನನ್ನು ಮಂತ್ರಿ ಮಾಡಬಹುದಿತ್ತು. ಆದರೂ ಮಾಡಲಿಲ್ಲ. ಸಭಾಧ್ಯಕ್ಷೆ ಆಗುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ. ಈ ಬಗ್ಗೆ ನನಗೆ ಇನ್ನೂ ಬೇಸರ ಇದೆ ಎಂದು ಬರೆದುಕೊಂಡಿದ್ದಾರೆ.