ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ: ಆದರೆ ಇದು ಅಂತಿಮ ನಿರ್ಧಾರ ಅಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್.

ಬೆಂಗಳೂರು,ಜೂನ್,4,2021(www.justkannada.in):  ಕೊರೊನಾ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆ ರದ್ಧು ಮಾಡಿದರೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk

ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್,  ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ ಕೋರ್ ಸಬ್ಜೆಕ್ಟ್ ಪರೀಕ್ಷೆ ನಡೆಸಲಾಗುತ್ತದೆ. ಮಲ್ಟಿ ಚಾಯ್ಸ್ ಪ್ರಶ್ನೆಗಳ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಶ್ನೆಗಳು ಸರಳವಾಗಿರುತ್ತವೆ. ಇನ್ನೊಂದು ಭಾಷೆ ಪರೀಕ್ಷೆ ನಡೆಯಲಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆ ಮಾಡಲಾಗುವುದು. ಪರೀಕ್ಷೆಯಲ್ಲಿ ಎಲ್ಲರನ್ನೂ ಪಾಸ್ ಮಾಡುತ್ತೇವೆ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು. ಪ್ರೌಢಶಿಕ್ಷಣ ಮಂಡಳಿ ಮಾರ್ಗಸೂಚಿ ನೀಡಲಿದೆ ಎಂದು ಹೇಳಿದ್ದಾರೆ.

ನಾವು ಜುಲೈ ಮೂರನೇ ವಾರ ನಡೆಸುವ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದೆ. 10 ದಿನ ಮೊದಲು ದಿನಾಂಕ ಪ್ರಕಟಿಸಲಾಗುವುದು. ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಮತ್ತೊಮ್ಮೆ ಫ್ರೆಷರ್ಸ್ ರೀತಿಯಲ್ಲಿ ಪರೀಕ್ಷೆ ನಡೆಯಲಿದೆ.

6 ಸಾವಿರ ಪರಿಕ್ಷಾ ಕೇಂದ್ರಗಳಲ್ಲಿ 1 ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ ಕೂರಿಸಿ ಪರೀಕ್ಷೆ ನಡೆಸಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ನೀಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಇನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದೇ ಅಂತಿಮವಲ್ಲ. ಪರೀಕ್ಷೆ ನಡೆಯುವ ವೇಳೆ 3ನೇ ಅಲೆ ಬಂದರೆ ಆಗಲೂ ತಕ್ಷಣಕ್ಕೆ ನಿರ್ಧಾರ ಪರಿಶೀಲನೆ ಮಾಡಲಾಗುತ್ತದೆ ಎಂದು ತಿಳಿಸದರು.

Key words: Examination – SSLC – not final- Education- Minister- Suresh Kumar.